Skip to playerSkip to main contentSkip to footer
  • 8 years ago
ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ಸರ್ಕಾರ ಚಳಿಗಾಲದ ಅಧಿವೇಶನ ನಡೆಸುತ್ತದೆ. ಆದರೆ, ಸಮಗ್ರವಾಗಿ ಚರ್ಚೆ ನಡೆಯುವುದಿಲ್ಲ. ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಹೆಸರಿನಲ್ಲಿ ಸರ್ಕಾರ ಮಜಾ ಮಾಡಲಿಕ್ಕೆ ಬರುತ್ತದೆಯೇ?' ಎಂದು ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಪ್ರಶ್ನಿಸಿದರು. ಗುರುವಾರ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು, 'ಉತ್ತರ ಕರ್ನಾಟಕದ ಭಾಗದ ಸಮಸ್ಯೆ ಚರ್ಚೆ ಚರ್ಚಿಸಲು ಬೆಳಗಾವಿಯಲ್ಲಿ 10 ದಿನದ ಅಧಿವೇಶನ ನಡೆಸುವ ಬದಲು, 30 ದಿನಗಳ ಕಾಲ ಅಧಿವೇಶನ ನಡೆಸಬೇಕು' ಎಂದು ಒತ್ತಾಯಿಸಿದರು. ಬೆಳಗಾವಿಯಲ್ಲಿ 30 ದಿನಗಳ ಕಾಲ ಅಧಿವೇಶನ ನಡೆಸಬೇಕು ಎಂದು ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ಪತ್ರ ಬರೆದಿದ್ದೇನೆ. ಕಾಂಗ್ರೆಸ್ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಕಡೆಗಣಿಸಿದೆ. ಈ ಬಾರಿಯ ಅಧಿವೇಶನದಲ್ಲಾದರೂ ಸಮಗ್ರವಾಗಿ ಚರ್ಚೆ ನಡೆಯಬೇಕು' ಎಂದು ಒತ್ತಾಯಿಸಿದರು.
Devarhipparagi MLA AS Patil Nadahalli demand for the 30 days of winter session at Suvarna Vidhana Soudha, Belagavi to discuss about issues of North Karnataka.

Category

🗞
News

Recommended