Skip to playerSkip to main contentSkip to footer
  • 8 years ago
ದಕ್ಷಿಣ ಕನ್ನಡ ಜಿಲ್ಲಾ ಬಿಲ್ಲವ ಸಂಘದಿಂದ ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೊಡಿ ಮರ ಸಲ್ಲಿಸುವ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಪೂಜಾರಿ ಅವರ ಬಳಿ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ತಲೆ ಸವರಿದ ಜನಾರ್ಧನ್ ಪೂಜಾರಿ ಆಶೀರ್ವಾದ ಮಾಡಿದರು. ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಂಟ್ವಾಳಕ್ಕೆ ಆಗಮಿಸಿದ್ದರು. ಕಾಂಗ್ರೆಸ್‌ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿರುವ ಮಾಹಿತಿ ಇದ್ದರೂ ಸಿ.ಎಂ, ಸಮೀಪದಲ್ಲೇ ಇದ್ದ ಪೂಜಾರಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿರಲಿಲ್ಲ.
Nalin Kumar recently went upto janardhan poojary and asked about his well being and got blessings from him.

Category

🗞
News

Recommended