Skip to playerSkip to main contentSkip to footer
  • 12/1/2017
Gujarat Assembly Elections 2017: Bharatiya Janata Party (BJP) may announce a Patel as its chief ministerial candidate in Gujarat.

ಪಟೇಲ್ ಸಮುದಾಯಕ್ಕೆ ಬಿಜೆಪಿಯಿಂದ ಸಿಎಂ ಪಟ್ಟ? ಅಭ್ಯರ್ಥಿ ಯಾರು? ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ (ಪಾಸ್) ಸಂಚಾಲಕ ಹಾರ್ದಿಕ್ ಪಟೇಲ್ ಸಮಾವೇಶಗಳಿಗೆ ಸಮರೋಪಾದಿಯಲ್ಲಿ ಜನ ಹರಿದು ಬರುತ್ತಿರುವುದು ಬಿಜೆಪಿಯ ನಿದ್ದೆಗೆಡಿಸಿದೆ.ಹೀಗಾಗಿ ಗುಜರಾತ್ ವಿಧಾನಸಭೆ ಚುನಾವಣೆಗೂ ಮುನ್ನ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಜೆಪಿ ಘೋಷಣೆ ಮಾಡುವ ಸಾಧ್ಯತೆ ಇದ್ದು, ಪಟೇಲ್ ಸಮುದಾಯದವರು ಸಿಎಂ ಅಭ್ಯರ್ಥಿಯಾಗುವ ಎಲ್ಲಾ ಸಾಧ್ಯತೆಗಳಿವೆ.ಈ ಮೂಲಕ ರಾಜ್ಯದಲ್ಲಿ ಶೇಕಡಾ 14 ರಷ್ಟು ಇರುವ ಪಟೇಲರ ಮತಗಳನ್ನು ಸೆಳೆಯುವ ಯೋಜನೆಯನ್ನು ಬಿಜೆಪಿ ಹಾಕಿಕೊಂಡಿದೆ.ಬಿಜೆಪಿಯಿಂದ ಪಟೇಲ್ ಸಮುದಾಯದ ಕಣ್ಮಣಿಯಾಗಿ ಕಾಣಿಸಿಕೊಳ್ಳುತ್ತಿರುವವರು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್. ನಿತಿನ್ ಪಟೇಲ್ ಬಗ್ಗೆ ಪಕ್ಷದಲ್ಲೂ ಅಂಥಹ ವಿರೋಧ ಧ್ವನಿಗಳಿಲ್ಲ. ಹೀಗಾಗಿ ಬಿಜೆಪಿ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಮಾಡುವ ಎಲ್ಲಾ ಸಾಧ್ಯತೆಗಳೂ ಇವೆ.ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೇರುವುದು ಬಿಜೆಪಿ ಹಿಂದಿನಿಂದಲೂ ಅನುಸರಿಸಿಕೊಂಡು ಬಂದ ತಂತ್ರ. ಈ ಮೂಲಕ ಅಭ್ಯರ್ಥಿಗಳ ಸಮುದಾಯದ ಮತಗಳನ್ನು ಸೆಳೆಯುವುದು, ಸಿಎಂ ಅಭ್ಯರ್ಥಿಗಳ ತವರು ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದನ್ನು ಬಿಜೆಪಿ ಕರಗತ ಮಾಡಿಕೊಂಡಿದೆ.

Category

🗞
News

Recommended