Skip to playerSkip to main contentSkip to footer
  • 12/8/2017
ಹಾಯ್ ಬೆಂಗಳೂರು ಪತ್ರಿಕೆಯ ಪ್ರಧಾನ ಸಂಪಾದಕ ರವಿ ಬೆಳೆಗೆರೆಯನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಪದ್ಮನಾಭನಗರದ ಕಚೇರಿಯಲ್ಲಿ ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.ಈ ಬಗ್ಗೆ ಅಪ್ಡೇಟ್ಸ್ ಇಲ್ಲಿದೆ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ವೇಳೆ ಬಂಧಿತನಾಗಿದ್ದ ತಾಹೀರ್ ಹುಸೇನ್ ಎಂಬಾತ ನೀಡಿದ್ದ ಮಾಹಿತಿ ಮೇರೆಗೆ ಮತ್ತೊಬ್ಬ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಯನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು.ವಿಚಾರಣೆ ವೇಳೆ ವಿಜಯಪುರ ಮೂಲದ ಶಶಿಧರ್, ರವಿ ಬೆಳಗೆರೆ ಅವರು 30 ಲಕ್ಷ ರು ಸುಪಾರಿ ನೀಡಿ, ಸುನಿಲ್ ಹೆಗ್ಗರವಳ್ಳಿಯನ್ನು ಕೊಲ್ಲಲು ಸೂಚಿಸಿದ್ದರು ಎಂದು ಹೇಳಿದ್ದ. ಈ ನಿಟ್ಟಿನಲ್ಲಿ ಹೆಚ್ಚಿನ ವಿಚಾರಣೆಗಾಗಿ ರವಿ ಬೆಳಗೆರೆಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಯ್ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಅವರನ್ನು ಕೊಲ್ಲಲು ರವಿ ಬೆಳಗೆರೆ ಸುಪಾರಿ ಕೊಟ್ಟಿದ್ದರು ಎಂದು ಶಾರ್ಪ್ ಶೂಟರ್ಸ್ ಶಶಿಧರ್ ಹೇಳಿದ್ದ ಎಂದು ಟಿವಿ ಮಾಧ್ಯಮಗಳಲ್ಲಿ ವರದಿಯಾಗಿದೆ.

Category

🗞
News

Recommended