ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಎಸ್ ಎಂ ಕೃಷ್ಣ ನಾಪತ್ತೆ? | Oneindia Kannada

  • 6 years ago
ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಬೆಂಗಳೂರಿನಲ್ಲಿ ನಡೆದ 'ನವ ಕರ್ನಾಟಕ ಪರಿವರ್ತನಾ ಯಾತ್ರೆ'ಗೆ ಗೈರು ಹಾಜರಾಗಿದ್ದರು. ಕೃಷ್ಣ ಅವರ ಗೈರು ಹಾಜರಿ ಕುತೂಹಲಕ್ಕೆ ಕಾರಣವಾಗಿದೆ. 2017ರ ಮಾರ್ಚ್‌ನಲ್ಲಿ ಎಸ್‌.ಎಂ.ಕೃಷ್ಣ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಬಳಿಕ ಅವರು ಪಕ್ಷದ ಚಟುವಟಿಕೆಯಲ್ಲಿ ಕಾಣಿಸಿಕೊಂಡಿದ್ದು ತೀರಾ ವಿರಳ.ಅಮಿತ್ ಶಾ ಎರಡು ದಿನಗಳ ಕಾಲ ಕರ್ನಾಟಕಕ್ಕೆ ಬಂದಿದ್ದಾಗ ಎಸ್.ಎಂ.ಕೃಷ್ಣ ಪಕ್ಷದ ಕಚೇರಿಯಲ್ಲಿ ಕಾಣಿಸಿಕೊಂಡಿದ್ದರು. ನಂತರ ನ.2ರಂದು ಪರಿವರ್ತನಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲೂ ಅವರು ಪಾಲ್ಗೊಂಡಿರಲಿಲ್ಲ. ಭಾನುವಾರ ನಡೆದ ಪರಿವರ್ತನಾ ಯಾತ್ರೆಗೂ ಅವರು ಗೈರಾದರು.ಕೃಷ್ಣ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿದ್ದಾರೆಯೇ? ಎಂಬ ಪ್ರಶ್ನೆಗೆ ಉತ್ತರವಿಲ್ಲ. ಕಳೆದ ವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳ ವಿವಾಹ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು. ಯಡಿಯೂರಪ್ಪ ಅವರ ಪಕ್ಕದಲ್ಲಿಯೇ ಕುಳಿತಿದ್ದರು....

Former Chief Minister, BJP leader S.M.Krishna was absent in the Nava Karnataka Parivarthana Yatra in J.P.Nagar Bengaluru on December 10, 2017.

Recommended