ಸಚಿವ ತನ್ವೀರ್ ಸೇಠ್ ಗೆ ಜೀವ ಬೆದರಿಕೆ | Oneindia Kannada

  • 6 years ago
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಗೆ ಜೀವ ಬೆದರಿಕೆ ಹಾಕಿದ್ದು, ಪೊಲೀಸ್ ರಕ್ಷಣೆ ನೀಡಲಾಗಿದೆ. ಸಚಿವ ತನ್ವೀರ್ ಸೇಠ್ ಅವರಿಗೆ ಮೆಸೇಜ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಸಚಿವ ತನ್ವೀರ್ ಸೇಠ್ ಅವರು ಈಗಾಗಲೇ ರಾಜ್ಯದ ಗೃಹ ಸಚಿವ ರಾಮಲಿಂಗರೆಡ್ಡಿ ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶರಿಗೆ ಲಿಖಿತ ದೂರು ನೀಡಿದ್ದಾರೆ. ಬೆದರಿಕೆ ಹಾಕಿರುವ ವ್ಯಕ್ತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ. ಸಚಿವ ತನ್ವೀರ್ ಸೇಠ್ ಅವರ ಮನವಿಗೆ ಕೂಡಲೇ ಸ್ಪಂದಿಸಿರುವ ಸರಕಾರ ಹಾಗೂ ಪೊಲೀಸ್ ಮುಖ್ಯಸ್ಥರು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ತನ್ವೀರ್ ಸೇಠ್ ಅವರ ಬೆಂಗಳೂರಿನ ನಿವಾಸ ಹಾಗೂ ಮೈಸೂರಿನ ಎನ್.ಆರ್. ಮೊಹಲ್ಲದಲ್ಲಿರುವ ಸಚಿವರ ಸ್ವಗೃಹಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Recently Minister Tanveer sait has received life threatening message and is currently under strict police protection.

Recommended