Shravanabelagola Mahamastakabhisheka becomes pride for minister A Manju and MLA Balakrishna in Hassan. Officers and media witness for such situation on Wednesday. Here is the report of current scenario.
ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಮಹಾ ವಿರಾಗಿಯ ಮಹಾಮಸ್ತಕಾಭಿಷೇಕಕ್ಕೆ ಎರಡು ದಿನವಷ್ಟೇ ಬಾಕಿ ಇದೆ. ಮಹಾಮಸ್ತಕಾಭಿಷೇಕ್ಕೆ ಈಗಾಗಲೇ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ರಿಂದ ಚಾಲನೆ ದೊರೆತಾಗಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೂ ಶುಭ ಹಾರೈಸಿದ್ದಾರೆ. ಫೆಬ್ರವರಿ 19ರಂದು ಶ್ರವಣಬೆಳಗೊಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಬರಲಿದ್ದಾರೆ. ಇನ್ನು ಮಹಾಮಸ್ತಕಾಭಿಷೇಕ ಕಣ್ಣೆದುರು ಇಟ್ಟುಕೊಂಡು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರವೂ ಚುನಾವಣೆ ಆಯೋಗದ ಮಧ್ಯಪ್ರವೇಶದಿಂದ ತಣ್ಣಗಾಗಿದೆ.