ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಎದುರಾಳಿಗಳು ಇಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಕಣಕ್ಕಿಳಿದಿರುವ ಇಬ್ಬರು ಹಣಬಲದಲ್ಲಿ ಎದುರಾಳಿಗಳು ಆಗಬಹುದು. ಆದರೆ, ಜನರಿಗೆ ಸ್ಪಂದಿಸುವ ವಿಚಾರ, ಕ್ಷೇತ್ರದ ಅಭಿವೃದ್ಧಿಗಾಗಿ ಕೆಲವ ಮಾಡುವ ವಿಚಾರದಲ್ಲಿ ಎದುರಾಳಿಗಳಲ್ಲ' ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯಾನಾಯ್ಕ ಹೇಳಿದರು. ಶಾರದಾ ಪೂರ್ಯಾನಾಯ್ಕ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹಾಲಿ ಶಾಸಕಿ. 2018ರ ವಿಧಾನಸಭೆ ಚುನಾವಣೆಗೆ ಅವರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ. ಈಗಾಗಲೇ ಅವರು ಕ್ಷೇತ್ರದಲ್ಲಿ ಪ್ರಚಾರ ಕಾರ್ಯದನ್ನು ಬ್ಯುಸಿಯಾಗಿದ್ದಾರೆ.
Be the first to comment