Skip to playerSkip to main contentSkip to footer
  • 12/7/2020
ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ಜರುಗಿದ ಕೆಲವು ಪ್ರಮುಖ ಘಟನೆಗಳನ್ನು ಈ ವೀಡಿಯೊದಲ್ಲಿ ನೋಡೋಣ.

ನಿಸ್ಸಾನ್ ಕಂಪನಿಯು ತನ್ನ ಮ್ಯಾಗ್ನೈಟ್ ಕಾಂಪ್ಯಾಕ್ಟ್-ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಎಸ್‌ಯುವಿಯ ಆರಂಭಿಕ ಬೆಲೆ ದೆಹಲಿಯ ಎಕ್ಸ್‌ಶೋರೂಂ ದರದಂತೆ ರೂ.4.99 ಲಕ್ಷಗಳಾಗಿದೆ.

ಕಿಯಾ ಕಂಪನಿಯ ಸೊನೆಟ್ ಎಸ್‌ಯುವಿಯು ಭಾರತದಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್-ಎಸ್‌ಯುವಿ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. 2020ರ ನವೆಂಬರ್ ತಿಂಗಳಲ್ಲಿ ಸೊನೆಟ್ ಎಸ್‌ಯುವಿಯ 11,400ಕ್ಕೂ ಹೆಚ್ಚು ಯುನಿಟ್ ಗಳನ್ನು ಮಾರಾಟ ಮಾಡಲಾಗಿದೆ.

ಈ ಮೂಲಕ ಮಾರಾಟದಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾವನ್ನು ಹಿಂದಿಕ್ಕಿದೆ.

ಬ್ಯಾಟರಿ ಮ್ಯಾನೇಜ್ ಮೆಂಟ್ ಸಿಸ್ಟಂನಲ್ಲಿ ಸಮಸ್ಯೆ ಕಂಡು ಬಂದ ಕಾರಣಕ್ಕೆ ಹ್ಯುಂಡೈ ಕಂಪನಿಯು 2019ರ ಏಪ್ರಿಲ್ 1ರಿಂದ 2020ರ ಅಕ್ಟೋಬರ್ 31ರವರೆಗೆ ಉತ್ಪಾದಿಸಲಾದ ಕೋನಾ ಎಲೆಕ್ಟ್ರಿಕ್ ಎಸ್‌ಯುವಿಯ 456 ಯುನಿಟ್‌ಗಳನ್ನು ರಿಕಾಲ್ ಮಾಡಿದೆ.

Category

🚗
Motor

Recommended