ರಕ್ಷಿತ್ ಶೆಟ್ಟಿ 777 ಚಾರ್ಲಿ ಸಿನಿಮಾ ಬಿಡುಗಡೆ ಸಮಯದಲ್ಲೇ ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ ಸಿನಿಮಾ ಕೂಡ ಬಿಡುಗಡೆಯಾಗುತ್ತಿದೆ ಎನ್ನಲಾಗುತ್ತಿದೆ. ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ಈಗಾಗಲೇ ಭಾರಿ ಕುತೂಹಲ ಮೂಡಿಸಿದೆ. ಪ್ಯಾನ್ ಮಟ್ಟದಲ್ಲಿ ಮೂಡಿಬರುತ್ತಿರುವ ಪುಷ್ಪ ಸಿನಿಮಾ ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನು ಅಧಿಕೃತವಾಗಿ ಮಾಹಿತಿ ಬಹಿರಂಗವಾಗಿಲ್ಲ. ಅದೇ ಸಮಯದಲ್ಲಿ ರಕ್ಷಿತ್ ಸಿನಿಮಾ ಬಿಡುಗಡೆ ಆಗುತ್ತಿರುವುದು ವಿಶೇಷ. 777 ಚಾರ್ಲಿ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ.
Actor Rakshit Shetty Starrer 777 Charlie Movie to Release on December 31.
Be the first to comment