Skip to playerSkip to main contentSkip to footer
  • 5/22/2022
ಬೆಂಗಳೂರಿನಿಂದ ಬ್ರಿಗೇಡ್ ರಸ್ತೆಯ ಶಾಪಿಂಗ್ ಕಾಂಪ್ಲೆಕ್ಸ್‍ನಲ್ಲಿ ಅವಘಡ ನಡೆದಿದೆ. ಫುಡ್‍ಕೋರ್ಟ್‍ನಲ್ಲಿ ಊಟ ಮುಗಿಸಿ ಐದನೇ ಮಹಡಿಯಿಂದ ಮೆಟ್ಟಿಳಿಯುವಾಗ ಯುವತಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಆಕೆಯನ್ನು ರಕ್ಷಿಸುವ ಭರದಲ್ಲಿ ಗೆಳಯನೂ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಯುವತಿ ಲಿಯಾ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಪೀಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಮೃತಪಟ್ಟ ಯುವತಿಯ ರಕ್ತದ ಮಾದರಿಯನ್ನು ಎಫ್‍ಎಸ್‍ಎಲ್‍ಗೆ ರವಾನೆ ಮಾಡಲಾಗಿದೆ. ಇನ್ನು ಮಾಲ್‍ನಲ್ಲೂ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಯುವಕ ಯುವತಿ ಜೊತೆ ಬಂದಿದ್ದ ಸ್ನೇಹಿತರಿಂದಲೇ ಮಾಹಿತಿ ಕಲೆ ಹಾಕಿದ್ದಾರೆ. ಇನ್ನು ಘಟನೆ ಸಂಬಂಧ ಮೃತ ಯುವತಿ ಲಿಯಾ ತಾಯಿ ಆಕಸ್ಮಿಕ ಸಾವು ಎಂದು ದೂರು ನೀಡಿದ್ದಾರೆ. ಹೀಗಾಗಿ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಇಂದು ಯುವತಿಯ ಮರಣೋತ್ತರ ಪರೀಕ್ಷೆ ನಡೆಯಲಿದೆ.

#PublicTV #BrigadeRoad

Category

🗞
News

Recommended