Skip to playerSkip to main content
  • 10 months ago
ಹಾವೇರಿ : ಫ್ರಿಡ್ಜ್ ಸ್ಫೋಟಗೊಂಡು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಹಾವೇರಿಯ ಮಂಜುನಾಥ ನಗರದಲ್ಲಿ ತಡರಾತ್ರಿ ನಡೆದಿದೆ. ಫ್ರಿಡ್ಜ್ ಸ್ಫೋಟಕ್ಕೆ ಚನ್ನಬಸಪ್ಪ ಗೂಳಪ್ಪನವರ್ ಮನೆಯಲ್ಲಿದ್ದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಫೋಟದಿಂದಾಗಿ ಅಕ್ಕಪಕ್ಕದ ಮನೆಯವರು ಆತಂಕಗೊಂಡಿದ್ದಾರೆ. ಫ್ರಿಡ್ಜ್ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.ಇತ್ತೀಚಿನ ಘಟನೆ : ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚಿಗೆ (1-1-25ರಂದು) ನಡೆದಿತ್ತು. ಅಡುಗೆ ಸಹಾಯಕಿ ಉಮಾದೇವಿ (52)ಗೆ ಗಂಭೀರ ಗಾಯವಾಗಿದ್ದು, ಜಯಮ್ಮ (55) ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಹೊಸವರ್ಷದ ಹಿನ್ನೆಲೆ ಮಧ್ಯಾಹ್ನ ಮಕ್ಕಳಿಗೆ ಪಲಾವ್ ಮತ್ತು ಪಾಯಸ ಮಾಡುತ್ತಿದ್ದಾಗ ಈ ಘಟನೆ ನಡೆದಿತ್ತು. ಗಂಭೀರವಾಗಿ ಗಾಯಗೊಂಡ ಅಡುಗೆ ಸಹಾಯಕಿ ಉಮಾದೇವಿಗೆ ಮಧುಗಿರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದನ್ನೂ ಓದಿ : ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟದ ಕುಕ್ಕರ್ ಸ್ಪೋಟ : ಇಬ್ಬರಿಗೆ ಗಾಯ - COOKER BLAST

Category

🗞
News
Transcript
00:00♪♪
00:10♪♪
00:20♪♪
00:30♪♪
00:40♪♪
00:50♪♪
01:00♪♪
01:10♪♪
Be the first to comment
Add your comment

Recommended