Skip to playerSkip to main content
  • 7 weeks ago
ತುಮಕೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರನ್ನೇ ಮುಂದುವರೆಸಬೇಕೆಂದು ಒತ್ತಾಯಿಸಿ ಅಭಿಮಾನಿಗಳು ನಗರದಲ್ಲಿ ರಸ್ತೆ ತಡೆದು ಪ್ರತಿಭಟಿಸಿದರು.ಅಲ್ಲದೆ ಕೆಲಕಾಲ ಸಿದ್ದರಾಮಯ್ಯ ಅಭಿಮಾನಿಗಳು ಕೋಟೆ ಆಂಜನೇಯ ಸ್ವಾಮಿ ವೃತ್ತದಲ್ಲಿ ಉರುಳು ಸೇವೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿದರು. ಅಭಿಮಾನಿಗಳು ಹಾಗೂ ಅಹಿಂದ ಮುಖಂಡರು ಧರಣಿಯಲ್ಲಿ ಪಾಲ್ಗೊಂಡರು. ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಹೈಕಮಾಂಡ್ ಈ ಕುರಿತು ಗಮನ ಹರಿಸಬೇಕೆಂದು ಆಗ್ರಹಿಸಿದರು.ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ: ಸಿದ್ದರಾಮಯ್ಯ ಅವರನ್ನು ಬದಲಾಯಿಸಬಾರದು, ಬದಲಿಸಿದರೆ ಅಹಿಂದ ಸಂಘಟನೆ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂಬ ಎಚ್ಚರಿಕೆಯ ಸಂದೇಶ ರವಾನಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವದಲ್ಲಿರಬೇಕೆಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರಬೇಕು: ಅಹಿಂದ ವರ್ಗಗಳ ನಾಯಕರಾಗಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದರಿಂದ ಜನ ವಿಶ್ವಾಸದಿಂದ ಮತ್ತು ನೆಮ್ಮದಿಯಿಂದ ಇದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವದಲ್ಲಿರಬೇಕು ಎಂದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಇರಬೇಕು, ಇಲ್ಲದಿದ್ದರೆ ಅದೋಗತಿಗೆ ತಲುಪಲಿದೆ ಎಂದು ಪ್ರತಿಭಟನಾಕಾರರು ಹೇಳಿದರು.ಇವುಗಳನ್ನೂ ಓದಿ: ಸಿಎಂ ಗದ್ದುಗೆ ಗುದ್ದಾಟ ಬಗೆಹರಿಸುವಲ್ಲಿ ಹೈಕಮಾಂಡ್ ಕೂಡಾ ಅಸಹಾಯಕ ಸ್ಥಿತಿಯಲ್ಲಿದೆ: ಬಸವರಾಜ್ ಬೊಮ್ಮಾಯಿಎರಡು ಬಾರಿ ಸಿಎಂ ಆದೆ, ಅಧಿಕಾರ ಹೋದಾಗ ನಾನು ಮಠಾಧೀಶರ ನೆರವು ಕೇಳಿಲ್ಲ: ಹೆಚ್​ಡಿಕೆ ಟಾಂಗ್​

Category

🗞
News
Transcript
00:30hey
00:56okay
01:00...
01:07...
01:11...
01:16...
01:21...
01:29Thank you very much.
Be the first to comment
Add your comment

Recommended