ಚಿಕ್ಕಬಳ್ಳಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡು 5ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾದ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ವಾರ್ಡ್ ನಂಬರ್ 23ರ ದೊಡ್ಡಪೇಟೆಯ ಗಾಣಿಗ ಬೀದಿಯಲ್ಲಿ ಭಾನುವಾರ ಮಧ್ಯಾಹ್ನ ನಡೆಯಿತು."ಶಾರ್ಟ್ ಸರ್ಕ್ಯೂಟ್ನಿಂದಾಗಿ ಸುಮಾರು 5ಕ್ಕೂ ಅಧಿಕ ಮನೆಗಳಿಗೆ ಬೆಂಕಿ ಆವರಿಸಿದೆ" ಎಂದು ಸ್ಥಳೀಯರು ತಿಳಿಸಿದ್ದಾರೆ.ಸುದ್ದಿ ತಿಳಿದು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.ಈ ಕುರಿತು ಮಾತನಾಡಿದ ಹಾನಿಗೀಡಾದ ಮನೆಯೊಂದರ ಮಾಲೀಕ ಹಾಗು ಕರಾಟೆ ಮಾಸ್ಟರ್ ಲೋಕೇಶ್, "ನಮ್ಮ ಮನೆ ಮಾತ್ರವಲ್ಲದೇ ನಮ್ಮ ಬೀದಿಯಲ್ಲಿ ಸುಮಾರು ಮನೆಗಳಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಎಲ್ಲ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿವೆ. ನಮ್ಮ ಬಾಡಿಗೆದಾರ ಕೃಷ್ಣ ಸಿಂಗ್ ಅವರ ಮನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ನಷ್ಟ ಪರಿಹಾರ ನೀಡಲಿ" ಎಂದು ಒತ್ತಾಯಿಸಿದರು.ಇದನ್ನೂ ಓದಿ: ಪೊಲೀಸರಿಗೇ ಲಾಂಗ್ ತೋರಿಸಿ ಪರಾರಿಯಾದ ಮನೆಗಳ್ಳರು: ವಿಡಿಯೋ ನೋಡಿ
Be the first to comment