ತುಮಕೂರು: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಶೋಧ ನಡೆಸಿದೆ. ಸಿಬ್ಬಂದಿಯನ್ನು ಕಚೇರಿ ಆವರಣದಿಂದ ಹೊರಗೆ ಕಳುಹಿಸಿ, ಸಾರ್ವಜನಿಕರಿಗೂ ನಿರ್ಬಂಧ ಹಾಕಲಾಗಿದೆ.ಇದರ ನಡುವೆ, ಡಿಸಿ ಕಚೇರಿ ಸಭಾಂಗಣದಲ್ಲಿ ಎಡಿಸಿ ನೇತೃತ್ವದಲ್ಲಿ ಸಭೆ ನಡೆಯಿತು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.ಇದಲ್ಲದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಯನ್ನು ಹೊರ ಕಳುಹಿಸಲಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೂ ಯಾರೂ ಒಳಬರಬಾರದೆಂದು ಸೂಚಿಸಲಾಗಿದೆ.ಎಲ್ಲ ಕೊಠಡಿಗಳನ್ನು ನಿಷ್ಕ್ರಿಯ ಸಿಬ್ಬಂದಿ ಪರಿಶೀಲಿಸಿದ್ದಾರೆ. ಬೆಳಗ್ಗೆ ಸುಮಾರು 9.30ರ ವೇಳೆಯಲ್ಲಿ ಈ ರೀತಿ ಬಾಂಬೆ ಬೆದರಿಕೆ ಕುರಿತ ಇ-ಮೇಲ್ ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ್ದು ಇದರ ಆಧಾರದ ಮೇಲೆ ತಕ್ಷಣ ಎಚ್ಚೆತ್ತುಕೊಂಡ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.ಅಗ್ನಿಶಾಮಕ ದಳದ ಮೂರು ವಾಹನಗಳು ಜಿಲ್ಲಾಧಿಕಾರಿ ಕಚೇರಿ ಸುತ್ತಲೂ ನಿಂತಿದ್ದು ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ.ಇದನ್ನೂ ಓದಿ: ಗದಗ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ - ಮೇಲ್: ತೀವ್ರ ಪರಿಶೀಲನೆ ನಂತರ ಹುಸಿ ಬೆದರಿಕೆ ಎಂದು ದೃಢ
Be the first to comment