ಚಿಕ್ಕಮಗಳೂರು: ಸಂಕ್ರಾಂತಿ ಹಬ್ಬ ಮುಗಿದ ನಂತರ ರಾಜ್ಯದ ಮೂಲೆ ಮೂಲೆಯಲ್ಲಿಯೂ ಜಾತ್ರಾ ಮಹೋತ್ಸವ, ರಥೋತ್ಸವ, ಹಬ್ಬ ಹರಿ ದಿನಗಳು ಪ್ರಾರಂಭವಾಗುತ್ತವೆ. ಅದೇ ರೀತಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಶ್ರೀ ಶಕುನ ರಂಗನಾಥ ಸ್ವಾಮಿ ದೇವರ ಜಾತ್ರೆ ಅದ್ಧೂರಿ ಹಾಗೂ ಸಂಭ್ರಮ ಸಡಗರದಿಂದ ಬುಧವಾರ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಜಾತ್ರೆಯಲ್ಲಿ ಮಿಂದೆದ್ದರು.ಈ ಜಾತ್ರೆಗೆ ತನ್ನದೇ ಆದ ಭಕ್ತರ ಪಡೆಯೇ ಇದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಾಗೂ ಹೊರಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು. ಜಾತ್ರೆಯ ನಿಮಿತ್ತ ದೇವಾಲಯದ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿಶೇಷ ಭಜನಾ ಮೇಳಗಳನ್ನು ಆಯೋಜಿಸಲಾಗಿತ್ತು. ಸಖರಾಯಪಟ್ಟಣದ ಬೀದಿಗಳು ಭಕ್ತಾದಿಗಳಿಂದ ತುಂಬಿ ತುಳುಕುತ್ತಿದ್ದು, ಎಲ್ಲೆಡೆ ಹಬ್ಬದ ವಾತಾವರಣ ಮನೆಮಾಡಿತ್ತು. ಭಕ್ತರ ಅನುಕೂಲಕ್ಕಾಗಿ ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆಯು ಬಿಗಿ ಬಂದೋಬಸ್ತ್, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿತ್ತು. ಮಲೆನಾಡಿನ ಈ ಭಾಗದ ಪ್ರಮುಖ ಆರಾಧ್ಯ ದೈವವಾಗಿರುವ ಶಕುನ ರಂಗನಾಥನ ದರ್ಶನ ಪಡೆದ ಸಾವಿರಾರು ಭಕ್ತರು ಪುನೀತರಾದರು.ಇದನ್ನೂ ಓದಿ: ದಾಖಲೆ! ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ 2 ತಿಂಗಳಲ್ಲಿ ₹14 ಕೋಟಿಗೂ ಹೆಚ್ಚು ಆದಾಯ
Comments