Skip to playerSkip to main content
  • 5 hours ago
ಬಳ್ಳಾರಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ನಗರದಲ್ಲಿ ಭಿಕ್ಷೆ ಎತ್ತುವ ಮೂಲಕ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದರು.ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ನೇತೃತ್ವದಲ್ಲಿ ನಗರದ ಗಡಿಗಿ ಚನ್ನಪ್ಪ ವೃತ್ತ ಹಾಗೂ ಹಳೆ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿಗರು, ಸಾರ್ವಜನಿಕರಿಂದ ಭಿಕ್ಷೆ ಸಂಗ್ರಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.ಹಾಲು, ಬಸ್ ಪ್ರಯಾಣ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಒಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಜನರ ಆದಾಯ ಹೆಚ್ಚಾಗುತ್ತಿಲ್ಲ. ಇದರಿಂದ ಸಾಮಾನ್ಯ ಜನರ ಬದುಕು ದುಸ್ತರವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಸರ್ಕಾರ ಜನಸಾಮಾನ್ಯರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆಕ್ಷೇಪಿಸಿದ ಅವರು, ಬೆಲೆ ಏರಿಕೆಯನ್ನು ನಿಯಂತ್ರಿಸಿ ಜನರಿಗೆ ಆರ್ಥಿಕ ಹೊರೆಯಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ದರ ಏರಿಕೆ ಖಂಡಿಸಿ ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆ: ಮೆಜೆಸ್ಟಿಕ್​ನಲ್ಲಿ ಭಿಕ್ಷಾಪಾತ್ರೆ ಹಿಡಿದು ಆಕ್ರೋಶ

Category

🗞
News
Transcript
00:01Oh
00:30Thank you very much.
01:23Thank you very much.
01:37Thank you very much.
02:15Thank you very much.

Recommended